0 Shares

ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ‍್ಯಾಪಿಡೋ ಆ್ಯಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಷ್ಕರಕ್ಕೆ ತೆಲಂಗಾಣ ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ಒಕ್ಕೂಟ ಸೇರಿ ಇತರೆ ಕಾರ್ಮಿಕ ಸಂಘಗಳು ಕರೆ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಂಘ, ಸರ್ಕಾರ ವ್ಯವಸ್ಥಿತ ದರ ನಿಗದಿ ಮಾಡಿಲ್ಲ. ಖಾಸಗಿ ಸಂಸ್ಥೆಗಳು ತಮ್ಮದೇ ಆದ ದರ ನಿಗದಿ ಮಾಡಿವೆ.

ಇದರಿಂದ ಲಕ್ಷಾಂತರ ಗಿಗ್ ಕೆಲಸಗಾರರು ಆದಾಯ ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟಿಸಲು ನಿರ್ಧರಿಸಲಾಗಿದೆ ಎಂದು ಪೋಸ್ಟ್ ಮಾಡಿದೆ.

0 Shares

By admin

Leave a Reply

Your email address will not be published. Required fields are marked *