0 Shares

ಬೆಂಗಳೂರು : ಇಂದು ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 7 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ.

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ. ಕ್ಯಾಂಟರ್‌, ಬೈಕ್‌ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕಾರಿನಲ್ಲಿದ್ದ 6 ಜನ ಹಾಗೂ ಓರ್ವ ಬೈಕ್‌ ಸವಾರ ಸೇರಿ 7 ಮಂದಿ ಸ್ಥಳದಲ್ಲೇ ಜೀವಬಿಟ್ಟಿದ್ದಾರೆ.

ಅಪಘಾತಕ್ಕೀಡಾದ XUV 700 ಕಾರು (ಸಂಖ್ಯೆ KA-03 NW-0138) ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುತ್ತಿತ್ತು. ಕಾರಿನಲ್ಲಿದ್ದ 7 ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ವತ್ರೆಗೆ ರವಾನಿಲಾಗಿದೆ. ಈ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

0 Shares

By admin

Leave a Reply

Your email address will not be published. Required fields are marked *