ಮೈಸೂರು : ಮುಡಾ ಸೈಟ್ ಹಂಚಿಕೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ತಮ್ಮ ಮುಂಬಡ್ತಿಗಾಗಿ ಶಾಲಿನಿ ರಜನೀಶ್ ಅವರಿಗೆ 1 ಕೋಟಿ 60 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಈ ಕುರಿತು ತಮಗೆ ಫೆಬ್ರವರಿ 9 ರಂದೇ ಮಾಹಿತಿ ಲಭ್ಯವಾಗಿದ್ದು, ಇದಕ್ಕೆ ಪೂರಕವಾಗಿ ಸಾಕ್ಷಿಗಳೂ ಸಿಕ್ಕಿವೆ ಎಂದು ಹೇಳಿದ್ದಾರೆ. ಲಂಚದ ಬಗ್ಗೆ ಮಾಹಿತಿ ಬಂದ ಮರುದಿನವೇ ನಟೇಶ್‌ಗೆ ಮುಂಬಡ್ತಿ ನೀಡಿರುವುದು ಅನುಮಾನಕ್ಕೆ ಎಡೆಮಾಡಿದೆ.
ಹೀಗಾಗಿ ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿರೋದಾಗಿ ಅವರು ತಿಳಿಸಿದ್ದಾರೆ. ಶಾಲಿನಿ ರಜನೀಶ್ ಅವರಿಂದ ಸ್ಪಷ್ಟೀಕರಣ ಕೋರಿ ಪತ್ರ ಬರೆದಿರುವ ಕೃಷ್ಣ, ಪ್ರಕರಣದಿಂದ ಹೊರಬರಲು ನಟೇಶ್ ತಮ್ಮನ್ನು ಸಂಪರ್ಕಿಸಲು ಯತ್ನಿಸಿದ್ದರು ಎನ್ನಲಾದ ಆಡಿಯೋ ಕ್ಲಿಪ್ ಅನ್ನು ಸಹ ಬಿಡುಗಡೆ ಮಾಡಿದ್ದಾರೆ.
