0 Shares

ಬಾಗಲಕೋಟ : ಬಾಗಲಕೋಟ ಜಿಲ್ಲೆಯ ಇಲಕಲ್ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೈಕ್ ಗ್ಯಾರೇಜ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 8ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ.

ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಈ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಈ ಘಟನೆಯ ಕಾರಣ ಇನ್ನುವರೆಗೂ ತಿಳಿದುಬಂದಿಲ್ಲ.

ಮಾಹಿತಿ ದೊರೆಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಲಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

0 Shares

By admin

Leave a Reply

Your email address will not be published. Required fields are marked *