ದೇವನಹಳ್ಳಿ : ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭಾರೀ ಕಾರ್ಯಾಚರಣೆ. ನವದೆಹಲಿಯಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.5 ಕೆಜಿ ಮೆಥಾಂಪೆಟಮೈನ್ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.
ವೆರೋನಿಕಾ ಎಂಬ ನೈಜೀರಿಯಾ ಮೂಲದ ಮಹಿಳೆ ಬಂಧನ. ದೆಹಲಿಯಿಂದ ಬೆಂಗಳೂರಿಗೆ Akasa Air ನ QP 1812 ವಿಮಾನದಲ್ಲಿ ಪ್ರಯಾಣಿಸುವ ವೇಳೆ ಕಳ್ಳಸಾಗಣೆ ಯತ್ನ ಪತ್ತೆ. ಮಹಿಳೆಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ನಂತರ ವಿಮಾನ ನಿಲ್ದಾಣ ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
