0 Shares

ಬೆಂಗಳೂರು : ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಪಾರದರ್ಶಕತೆ ಮತ್ತು ನಿಯಮಿತತೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರವು ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಜ್ಞಾನವನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ. 2026–27ನೇ ಶೈಕ್ಷಣಿಕ ಸಾಲಿನಿಂದಲೇ ಈ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.

ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಈ ತಂತ್ರಜ್ಞಾನವನ್ನು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಡ್ಡಾಯವಾಗಿ ಅನುಷ್ಠಾನ ಮಾಡಲಾಗುತ್ತದೆ. ಒಟ್ಟು ₹2.16 ಕೋಟಿ ವೆಚ್ಚದಲ್ಲಿ Face Recognition ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳ ಹಾಜರಾತಿ ತಪ್ಪದಂತೆ ನೋಡಿಕೊಳ್ಳಲು ಈ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು, ಮೇ ತಿಂಗಳೊಳಗೆ ಎಲ್ಲಾ ಶಾಲೆಗಳಲ್ಲಿ ಎಐ ಆಧಾರಿತ ಮೊಬೈಲ್ ಆ್ಯಪ್ ಅನ್ನು ಅನುಷ್ಠಾನಗೊಳಿಸುವ ಗುರಿ ಹೊಂದಲಾಗಿದೆ. ಈ ಆ್ಯಪ್ ಮೂಲಕ ವಿದ್ಯಾರ್ಥಿಗಳ ಹಾಜರಾತಿ ನೇರವಾಗಿ ದಾಖಲೆಯಾಗಲಿದೆ.

ಇದಲ್ಲದೆ, SATS ತಂತ್ರಾಂಶದ ಮೂಲಕ ಪೋಷಕರು ತಮ್ಮ ಮಕ್ಕಳ ಹಾಜರಾತಿಯನ್ನು ಪರಿಶೀಲಿಸುವ ಅವಕಾಶ ದೊರೆಯಲಿದೆ. ಇದರಿಂದ ಶಾಲೆ–ಪೋಷಕರ ನಡುವಿನ ಸಂವಹನ ಮತ್ತಷ್ಟು ಬಲವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಶಿಕ್ಷಕರ ಹಾಜರಾತಿಗೂ Face Recognition ಕಡ್ಡಾಯ ಮಕ್ಕಳಿಗೆ ಮಾತ್ರವಲ್ಲ, ಇನ್ಮುಂದೆ ಶಿಕ್ಷಕರ ಹಾಜರಾತಿಗೂ Face Recognition ತಂತ್ರಜ್ಞಾನವನ್ನು ಅಳವಡಿಸಲಾಗುತ್ತದೆ. ಇದರಿಂದ ಶಿಕ್ಷಕರ ಹಾಜರಾತಿ ಕಳ್ಳಾಟಕ್ಕೆ ಸಂಪೂರ್ಣ ಬ್ರೇಕ್ ಬೀಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಶಿಕ್ಷಕರೂ ಸಹ ವಿದ್ಯಾರ್ಥಿಗಳಂತೆ Face Recognition ಮೂಲಕವೇ ಹಾಜರಾತಿ ನೀಡಬೇಕಾಗುತ್ತದೆ. ಈ ಕ್ರಮದಿಂದ ಶಾಲೆಗಳ ಕಾರ್ಯಕ್ಷಮತೆ ಹೆಚ್ಚಾಗುವುದರ ಜೊತೆಗೆ, ಶೈಕ್ಷಣಿಕ ವ್ಯವಸ್ಥೆಯಲ್ಲಿ ಶಿಸ್ತು ಮತ್ತು ಜವಾಬ್ದಾರಿ ಹೆಚ್ಚಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

0 Shares

By admin

Leave a Reply

Your email address will not be published. Required fields are marked *