ಮಧುಗಿರಿ : ದಲಿತ ಮುಖ್ಯಮಂತ್ರಿ ಯಾಕಾಗಬಾರದು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದರು. ಎಲ್ಲಾ ಸಮುದಾಯದವರಿಗೆ ನ್ಯಾಯ ನೀಡುವ ಪಕ್ಷ ಕಾಂಗ್ರೆಸ್ ಆಗಿದ್ದು, ನಮ್ಮ ಪಕ್ಷದಲ್ಲಿ ಎಲ್ಲ ಸಮುದಾಯದವರಿಗೂ ಅವಕಾಶ ಸಿಕ್ಕಿದೆ ಎಂದು ಹೇಳಿದರು.
ಮಧುಗಿರಿಯಲ್ಲಿ ಮಾತನಾಡಿದ ಅವರು, ದಲಿತರು ಮುಖ್ಯಮಂತ್ರಿ ಆದರೆ ತಪ್ಪೇನು? ಎಲ್ಲ ಸಮುದಾಯದವರಿಗೂ ಅವಕಾಶ ಸಿಕ್ಕಾಗ ಗೌರವವೂ ಬರಲಿದೆ ಎಂದು ಅಭಿಪ್ರಾಯಪಟ್ಟರು. ದಲಿತರು ಸಿಎಂ ಆದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳಿಗೂ ಗೌರವ ಸಿಗಲಿದೆ ಎಂದರು.
ಇದರಿಂದ ಕಾಂಗ್ರೆಸ್ ಪಕ್ಷಕ್ಕೂ ರಾಜಕೀಯವಾಗಿ ಅನುಕೂಲವಾಗಲಿದೆ ಎಂದು ರಾಜಣ್ಣ ಹೇಳಿದರು. ಕಾಂಗ್ರೆಸ್ ಯಾವತ್ತೂ ಎಲ್ಲ ವರ್ಗದ ಜನರಿಗೆ ಅವಕಾಶ ನೀಡುವ ಪಕ್ಷವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
