0 Shares

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ‌ ಹೆಮ್ಮೆ’ ಘೋಷವಾಕ್ಯದಡಿ ಆಯೋಜಿಸಿದ್ದ 3ನೇ ವರ್ಷದ ‘ಪೊಲೀಸ್ ಓಟ’ (ಕರ್ನಾಟಕ ಪೊಲೀಸ್ ರನ್) ಸ್ಪರ್ಧೆಗೆ ಮಾನ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ ಚಾಲನೆ ನೀಡಿದರು.

‘ಡ್ರಗ್ಸ್ ಮುಕ್ತ ಕರ್ನಾಟಕ’, ‘ಸೈಬರ್ ಅಪರಾಧ’ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ 10 ಕಿ.ಮೀ ಹಾಗೂ 5 ಕಿ.ಮೀ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಜಿಬಿಎ ಆಯುಕ್ತರಾದ ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಎಸ್‌ಬಿಐ ಬೆಂಗಳೂರು ವಲಯ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಹಾಗೂ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

0 Shares

By admin

Leave a Reply

Your email address will not be published. Required fields are marked *