0 Shares

ದೇವನಹಳ್ಳಿ : ಸರ್ಕಾರ ಮೀಸಲಾತಿಯನ್ನು 56% ಏರಿಸಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಕಾಯ್ದೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆದಿರುವುದು ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ನ್ಯಾಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ಮಾದಿಗ ದಂಡೋರಾ ಅಧ್ಯಕ್ಷ ಮಾರಪ್ಪ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಡಾ|| ಬಾಬು ಜಗಜೀವನ್‌ರಾಮ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ನಂತರ ತಹಸೀಲ್ದಾರ್ (ಗ್ರೇಡ್2 ) ಜಯಕುಮಾರ್‌ಗೆ ಮನವಿ ನೀಡಿ ಮಾತನಾಡಿ ಒಳ ಮೀಸಲಾತಿ ಜಾರಿಗೆ ರಾಜ್ಯ ಪಾಲರ ಅಂಕಿತ ದೊರೆತರೂ, ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಮೀಸಲಾತಿ 50% ಮೀರುವಂತಿಲ್ಲ ಎಂದು ನೀಡಿದ ತೀರ್ಪಿನ ಪ್ರಕಾರ ಒಳ ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಆದೇಶಗಳನ್ನು ಅಳವಡಿಸದೆ.

ನೇಮಕಾತಿ ಮಾಡಲು ಸೂಚಿಸಿರುವುದು ಮಾದಿಗ ಸಮುದಾಯದ ದೀರ್ಘ 35 ವರ್ಷಗಳ ಹೋರಾಟಕ್ಕೆ ಮಾಡಿದ ಅನ್ಯಾಯ ಹಾಗೂ ನಂಬಿಕೆ ದ್ರೋಹವಾಗಿದೆ ಇದರಲ್ಲಿ ನಮ್ಮ ಪರಿಶಿಷ್ಟರಲ್ಲೆ ಕೆಲವು ಕುತಂತ್ರಗಳು ನಡೆಯುತ್ತಿದೆ, ಸಿದ್ದರಾಮಯ್ಯನವರ ಬಲಗೈ ಬಂಟರಾದ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ. ಮಹದೇವಪ್ಪನವರ ಕುಮ್ಮಕ್ಕಿನಿಂದ ಮುಖ್ಯಮಂತ್ರಿ 15% ಒಳ ಮೀಸಲಾತಿಯನ್ನು ಗ್ರೂಪ್ ಎ, ಬಿ, ಸಿ ವರ್ಗೀಕರಣದಂತೆ ಜಾರಿಗೊಳಿಸಲು, ಸಂಬಂಧಿತ ಆದೇಶಗಳನ್ನು ತಕ್ಷಣ ತಿದ್ದುಪಡಿ ಮಾಡಲು ಹಾಗೂ 56% ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ನಮ್ಮ ಮಾದಿಗ ದಂಡೋರಾ ಒತ್ತಾಯ ಮಾಡುತ್ತಿದ್ದೇವೆ ಎಂದರು.

ಮಾದಿಗ ದಂಡೋರಾದ ತಾಲೂಕು ಅಧ್ಯಕ್ಷ ಅಣ್ಣೇಶ್ವರ ಎಂ.ವೆಂಕಟೇಶ್ ಮಾತನಾಡಿ ಸಚಿವ ಸಂಪುಟದ ನಿರ್ಣಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ಸರ್ಕಾರದ ಆದೇಶ ಪೂರ್ವ ಮೀಸಲಾತಿ ವ್ಯವಸ್ಥೆಯಂತೆ, ಅಂದರೆ ಸರ್ಕಾರದ ಆದೇಶದಂತೆ ಶೇಕಡಾ 15 ಪರಿಶಿಷ್ಟ ಜಾತಿ ಮತ್ತು ಶೇಕಡಾ 3 ಪರಿಶಿಷ್ಟ ಪಂಗಡ ಮೀಸಲಾತಿ ಹಾಗೂ ರೋಸ್ಟರ್ ಮಾರ್ಗಸೂಚಿಗಳಂತೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಲಾಗಿದೆ.

ರಾಜ್ಯದಲ್ಲಿರುವ ಖಾಲಿ ಹುದ್ದೆಗಳ ಭರ್ತಿಯನ್ನು ಒಳ ಮೀಸಲಾತಿಯ 15% ಹಂಚಿಕೆಯನ್ನು ಸ್ಪಷ್ಟವಾಗಿ ಅನ್ವಯಿಸಿ ಮಾತ್ರ ಕೈಗೊಳ್ಳಬೇಕು. ಉಪಗುಂಪುಗಳವಾರು ಹಂಚಿಕೆ ಹಾಗೂ ಪರಿಷ್ಕöÈತ ರೋಸ್ಟರ್ ಜಾರಿಗೊಳಿಸಿ, ಕಾನೂನು ಸಮರ್ಥನೆಗಳೊಂದಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು, ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯ ದತ್ತಾಂಶಗಳ ಆಧಾರದ ಮೇಲೆ 15% ಒಳ ಮೀಸಲಾತಿ ಉಪ ವರ್ಗೀಕರಣದಂತೆ ಜಾರಿಗೊಳಿಸಿ ಸ್ಪಷ್ಟ ಆದೇಶ ಹೊರಡಿಸಬೇಕು ಎಂದರು.

ಕಾರ್ಯದರ್ಶಿ ಬುಳ್ಳಹಳ್ಳಿ ಮುನಿರಾಜು ಮಾತನಾಡಿ ಮೀಸಲಾತಿ ಪ್ರಮಾಣವನ್ನು 56%ರಿಂದ 50%ಕ್ಕೆ ಇಳಿಸಿರುವ ವಿಚಾರದಲ್ಲಿ ಸರ್ಕಾರವು ನ್ಯಾಯಾಲಯದ ಮುಂದೆ ಸಂವಿಧಾನಾತ್ಮಕ ಹಾಗೂ ಕಾನೂನು ಆಧಾರದ ಮೇಲೆ ಸಮಗ್ರ ಹಾಗೂ ಪ್ರಬಲ ವಾದ ಮಂಡಿಸಬೇಕು, ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸಂವಿಧಾನ ತಿದ್ದುಪಡಿ ಕ್ರಮ ಕೈಗೊಳ್ಳಬೇಕು, ಮುಖ್ಯಮಂತ್ರಿಗಳು ಕೂಡಲೇ ಕ್ರಮ ಜರುಗಿಸಬೇಕು, ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದಿರುವ ಕೆ.ಹೆಚ್.ಮುನಿಯಪ್ಪ ರಾಜೀನಾಮೆ ನೀಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು.

ಈ ಸಮಯದಲ್ಲಿ ಜಾಲಿಗೆ ಗ್ರಾ.ಪಂ. ಮಾಜಿ ಅಧ್ಯಕ್ಷ ಸಿಂಗ್ರಹಳ್ಳಿ ಆನಂದಕುಮಾರ್, ತಾ.ಪ. ಮಾಜಿ ಸದಸ್ಯ ಗೋಪಾಲಸ್ವಾಮಿ, ಬುಳ್ಳಹಳ್ಳಿ ಮುನಿರಾಜು, ಸಾವಕನಹಳ್ಳಿ ಶ್ರೀನಿವಾಸ್, ಬಿದಲೂರು ಮುನಿಕೃಷ್ಣಪ್ಪ, ಸಾದಹಳ್ಳಿ ಮಂಜುನಾಥ್, ಭುವನಹಳ್ಳಿ ಆನಂದ್ ಹರಳೂರು ಹೆಚ್.ಕೆ.ಆನಂದ್, ಮುನಿಯಪ್ಪ, ನರಸಿಂಹಯ್ಯ, ಗುರಪ್ಪ, ಉಗನವಾಡಿ ರವಿಕುಮಾರ್, ನೀಳೇರಿ ನಾರಾಯಣಸ್ವಾಮಿ, ಮುನಿರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

0 Shares

By admin

Leave a Reply

Your email address will not be published. Required fields are marked *