0 Shares

ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ.

ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು ಆರೋಪಿಗಳ ವಿರುದ್ಧ ಸುಮಾರು 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್​ನಲ್ಲಿ ಆರು ಆರೋಪಿಗಳ ಹೇಳಿಕೆ ದಾಖಲು ಮಾಡಲಾಗಿದೆ. ಆರೋಪಿಗಳಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂಬ ವಿಷಯ ಬಹಿರಂಗವಾಗಿದೆ. ಎಲ್ಲರೂ ನಕಲಿ ಐಡಿಗಳನ್ನು ಕ್ರಿಯೇಟ್ ಮಾಡಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಕಾಮೆಂಟ್ ಮಾಡೋ ಉದ್ದೇಶಕ್ಕೆ ನಕಲಿ ಅಕೌಂಟ್ ಓಪನ್ ಮಾಡಿದ್ದರು ಎಂಬ ವಿಷಯ ಗೊತ್ತಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನು ಟಾರ್ಗೆಟ್ ಮಾಡಿ ಬಂಧಿತರು ಕೆಟ್ಟ ರೀತಿಯಲ್ಲಿ ಫೋಟೋ ಹಾಕಿ ಕಾಮೆಂಟ್ ಮಾಡಿದ್ದರು ಎಂಬುದು ತಿಳಿದು ಬಂದಿದೆ. ಪೋಸ್ಟ್ ಮಾಡುತ್ತಿರುವುದು ಅಶ್ಲೀಲ ಎಂಬುದು ಗೊತ್ತಿದ್ದೇ ಕಾಮೆಂಟ್ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ಮೊಬೈಲ್ ಅನ್ನು ವಶಪಡಿಸಿಕೊಂಡು ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗಿದ್ದು, ಡೇಟಾ ರಿಟ್ರೀವ್ ಮಾಡಿ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಕಾಮೆಂಟ್ ಮಾಡಿದ 12 ಐಡಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ಕಂಪನಿಗಳಿಗೆ ಪತ್ರ ಬರೆಯಲಾಗಿದ್ದು, ಇನ್ನಷ್ಟೇ ಅವರಿಂದ ಉತ್ತರ ಬರಬೇಕಿದೆ. ಸದ್ಯ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸೋದಾಗಿ ಉಲ್ಲೇಖ ಮಾಡಲಾಗಿದೆ. ಇತ್ತ ಚಾರ್ಜ್ ಶೀಟ್ ಸಲ್ಲಿಕೆ ಆಗುತ್ತಿದ್ದಂತೆ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್​ಗೆ ಜಾಮೀನು ಸಲ್ಲಿಕೆ ಮಾಡಿದ್ದಾರೆ. ಮಾರ್ಚ್ 24ಕ್ಕೆ ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಕಾಮೆಂಟ್ ಮಾಡಿದ ತಪ್ಪಿಗೆ 66 ದಿನಗಳಿಂದ ಆರು ಆರೋಪಿಗಳು ಜೈಲಿನಲ್ಲಿದ್ದಾರೆ.

0 Shares

By admin

Leave a Reply

Your email address will not be published. Required fields are marked *