0 Shares

ಬೀದರ್‌ : ಬೀದರ ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ವಿರುದ್ಧ ಪೊಲೀಸ್ ಇಲಾಖೆ ಮತ್ತೊಂದು ದೊಡ್ಡ ಕಾರ್ಯಾಚರಣೆ ನಡೆಸಿದೆ. ಬೀದರ್ ನಗರದ ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಾರ್ಕೋಟಿಕ್ ಅಂಶ ಹೊಂದಿರುವ ಸಿರಪ್ ಬಾಟಲಿಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ.

ಶಾಹೀನ್ ಕಾಲೇಜ್ ಕ್ರಾಸ್ ಸಮೀಪ ಸಾರ್ವಜನಿಕರಿಗೆ ಅನಧಿಕೃತವಾಗಿ ಸಿರಪ್ ಮಾರಾಟ ಮಾಡುತ್ತಿದ್ದರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ ಆರೋಪಿತರ ಬಳಿ ಇದ್ದ ಎರಡು ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ನಾರ್ಕೋಟಿಕ್ ಅಂಶ ಹೊಂದಿರುವ ಒಟ್ಟು 142 ಸಿರಪ್ ಬಾಟಲಿಗಳು ಪತ್ತೆಯಾಗಿದ್ದು, ಸುಮಾರು 24 ಸಾವಿರ 424 ರೂಪಾಯಿ ಮೌಲ್ಯದ ಮುದ್ದೆ ಮಾಲನ್ನು ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿತರು ಈ ಸಿರಪ್‌ಗಳನ್ನು ಹೈದರಾಬಾದ್‌ನಿಂದ ತರಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆಂಬುದು ಪ್ರಾಥಮಿಕ ವಿಚಾರಣೆಯಲ್ಲಿ ಬಹಿರಂಗವಾಗಿದೆ. ಪ್ರಕರಣ ಸಂಬಂಧ ಗಾಂಧಿಗಂಜ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದ್ದು, ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಪ್ರದೀಪ್ ಗುಂಟಿ ಅವರು ಶ್ಲಾಘಿಸಿದ್ದಾರೆ. ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಮುಕ್ತ ಜಿಲ್ಲೆಯನ್ನಾಗಿಸಲು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಮುಂದುವರೆಸಲಿದೆ ಎಂದು ತಿಳಿಸಿದ್ದಾರೆ.

0 Shares

By admin

Leave a Reply

Your email address will not be published. Required fields are marked *