0 Shares

ಬೆಂಗಳೂರು : ಅಡಿಗೆ ಅನಿಲ ಬೆಲೆ ಏರಿಕೆಗೆ ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮತ್ತು ಅವೈಜ್ಞಾನಿಕ “ಗಟಾರ್ ಗ್ಯಾಸ್” ಹೇಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಿನೂತನ ಅಣಕು ಪ್ರದರ್ಶನ ಹಾಗೂ ಅನಿಲ ದೊರೆ ಏರಿಕೆಯ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಇಂದು (ಶನಿವಾರ) ಬೆಂಗಳೂರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಬಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಅಡಿಗೆ ಅನಿಲದ ನಿರಂತರ ಬೆಲೆ ಏರಿಕೆ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ವಿನೂತನ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವ “ಗಟಾರ್ ಗ್ಯಾಸ್” ಕುರಿತ ಅವೈಜ್ಞಾನಿಕ ಹೇಳಿಕೆಗಳನ್ನು ಖಂಡಿಸಿ, ದೇಶದ ಜನತೆಗೆ ದಾರಿ ತಪ್ಪಿಸುವ ರೀತಿಯ ಈ ಹೇಳಿಕೆಗಳ ಬಗ್ಗೆ ಪ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ದೇಶದ ಜನರಿಗೆ ಅಡಿಗೆ ಅನಿಲ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವಾಗ ಸರ್ಕಾರದ ಜವಾಬ್ದಾರಿ ಏನು?ಜನರ ಕಷ್ಟಕ್ಕೆ ಪರಿಹಾರ ನೀಡುವುದು ಸರ್ಕಾರದ ಆದ್ಯ ಕರ್ತವ್ಯ, ಆದರೆ ಕೇಂದ್ರ ಸರ್ಕಾರ ಪ್ರಚಾರದಲ್ಲೇ ತೊಡಗಿಕೊಂಡಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಮಾತನಾಡುವ ಪ್ರಧಾನಿಯವರು “ಗಟಾರ್ ಗ್ಯಾಸ್” ಎಂಬ ಅವೈಜ್ಞಾನಿಕ ಹೇಳಿಕೆಗಳನ್ನು ನೀಡುವುದು ಎಷ್ಟುಸರಿಯೇ? ಇದು ದೇಶದ ಯುವಕರಿಗೂ ಮತ್ತು ವಿಜ್ಞಾನ ಮನೋಭಾವಕ್ಕೂ ತಪ್ಪು ಸಂದೇಶ ನೀಡುವಂತಾಗಿದೆ.

ಪಜನರು ದುಬಾರಿ ಗ್ಯಾಸ್ ದರದಿಂದ ಸಂಕಷ್ಟದಲ್ಲಿರುವಾಗ ಸರ್ಕಾರದ ಆದ್ಯತೆ ಏನು ಎಂಬುದರ ಬಗ್ಗೆ ಮೋದಿ ಸರ್ಕಾರ ಉತ್ತರ ನೀಡಬೇಕು. ಜನರಿಗೆ ಪರಿಹಾರ ನೀಡುವ ಬದಲು ಪ್ರಚಾರ ಮತ್ತು ರಾಜಕೀಯ ಭಾಷಣಗಳೇ ಹೆಚ್ಚಾಗಿವೆ. ಸಂಸತ್ತಿನಲ್ಲಿ ವಿರೋಧ ಪಕ್ಷನಾಯಕರಾದ ರಾಹುಲ್‌ ಗಾಂಧಿ ಅವರ ಪ್ರಶ್ನೆಗಳಿಗೆ ಉತ್ತರ ನೀಡದೆ ತಪ್ಪಿಸಿಕೊಳ್ಳುವುದು ಏಕೆ..? ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಕರ್ತವ್ಯ ಎಂಬುದನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ರವರು ಮರೆತು ಹೋಗಿದ್ದಾರೆ. ದೇಶದ ಜನತೆ ಅಡಿಗೆ ಅನಿಲದ ದುಬಾರಿ ದರಗಳಿಂದ ಅಡುಗೆ ಅನಿಲ ದೊರಕದೇ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ವಿಫಲವಾದ ಕೇಂದ್ರ ಸರ್ಕಾರದ ಈ ನಡೆ ಮಧ್ಯಮ ವರ್ಗ, ಬಡಜನರು, ಹೋಟೆಲ್ ಮಾಲೀಕರು ಹಾಗೂ ಗ್ರಾಹಕರಿಗೆ ತೀವ್ರ ಅನಾನುಕೂಲ ಉಂಟುಮಾಡುತ್ತಿದೆ ಎಂದು ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷತನವನ್ನು ಖಂಡಿಸಲಾಯಿತು. ಇದೇ ಸಂದರ್ಭದಲ್ಲಿ, ಜನರ ಸಮಸ್ಯೆಗಳಿಗೆ ಉತ್ತರ ನೀಡುವಲ್ಲಿ ವಿಫಲವಾದ ಪ್ರಧಾನಿ ನರೇಂದ್ರ ಮೋದಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತರರಾದ ಆನಂದ್ ಕುಮಾರ್ ಎಂ.ಎಸ್. ಪ್ರಕಾಶ್, ಒಬಳೇಶ್, ಚಿನ್ನಿ ಪ್ರಕಾಶ್, ಹೇಮರಾಜ್, ಪುಟ್ಟರಾಜು, ಸುಂಕದಕಟ್ಟೆ ನವೀನ್, ಕುಶಾಲ್ ಹರವೇಗೌಡ, ಸಾಯಿ ನವೀನ್, ಪ್ರವೀಣ್ ರಾವ್, ಬಾಲಾಜಿ ಡಿ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರುಗಳು ಭಾಗವಹಿಸಿದರು.

0 Shares

By admin

Leave a Reply

Your email address will not be published. Required fields are marked *