ಬೆಂಗಳೂರು : ಇಂದು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಾಟ ಮಾಡ್ತಿದ್ದ, ಹೈಡ್ರೋಪೊನಿಕ್ ಗಾಂಜಾ ಜಪ್ತಿ ಮಾಡಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ನಡೆದಿದೆ.
ಅಕ್ರಮ ಗಾಂಜಾವನ್ನು ಫೋಟೋ ಪ್ರೇಮಿನ ಒಳಗೆ ಇಟ್ಟು ಸಾಗಾಟ ಮಾಡುತ್ತಿದ್ದ, 1.125 ಕೆಜೆ ತೂಕದ 39.37 ಲಕ್ಷ ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಬ್ಯಾಗ್ ಪರಿಶೀಲನೆ ವೇಳೆ ಅಕ್ರಮ ಗಾಂಜಾ ಸಾಗಾಟ ಬೆಳಕಿಗೆ ಬಂದಿದ್ದು, ಬ್ಯಾಂಕಾಗ್ ನಿಂದ ಬೆಂಗಳೂರಿಗೆ ಬರುವ ವೇಳೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ದ NDPS ಕಾಯ್ದೆ 1985ರಡಿ ಪ್ರಕರಣ ದಾಖಲು ಮಾಡಿ, ಆರೋಪಿಯನ್ನು ಬಂದಿಸಿ, ಕಸ್ಟಮ್ಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
