ಬೀದರ್ : ಬೆಂಗಳೂರು ಸೇರಿ ಜಿಲ್ಲೆ ಜಿಲ್ಲೆಗಳಲ್ಲೂ ಗ್ಯಾಸ್ ಸಿಲಿಂಡರ್ ಅಭಾವ ತಲೆದೂರಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್ಗಳಿಗೆ ಬೀಗ ಜಡಿಯಲಾಗಿದೆ.
ಗ್ಯಾಸ್ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ ಸಂಕಷ್ಟ ಹಬ್ಬವಾಗಿದೆ. ಹಾಡಹಗಲೇ ರಾಜಾರೋಷವಾಗಿ ಸಿಲಿಂಡರ್ ಕಳ್ಳತನ ಮಾಡಿತ್ತಿದ್ದಾರೆ. ಬೀದರ್ನ ಶಾಲೆಯಲ್ಲಿದ್ದ 6 ಸಿಲಿಂಡರ್ ಕಳತನ ಮಾಡಿರುವಂತಹ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿದ್ದ 6 ಸಿಲಿಂಡರ್ಗಳನ್ನ ಕಳ್ಳರು ಹೊತ್ತೊಯ್ದಿದ್ದಾರೆ. ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಪೂರೈಸಿದ್ದ ಸಿಲಿಂಡರ್ಗಳನ್ನ ಅಡುಗೆಕೋಣೆ ಬೀಗ ಮುರಿದು ಕಳ್ಳರು ಹೊತ್ತೊಯ್ದಿದ್ದಾರೆ. ಸದ್ಯ ಈ ಕುರಿತಾಗಿ ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
