0 Shares

ದಳಪತಿ ವಿಜಯ್ ಕೊನೆಯ ಸಿನಿಮಾ ಎನ್ನಲಾಗಿದ್ದ ‘ಜನ ನಾಯಗನ್’ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದರು. ಆದರೆ, ಸಿನಿಮಾ ಸದ್ಯಕ್ಕಂತೂ ರಿಲೀಸ್ ಆಗೋದು ಅನುಮಾನವೇ. ಸದ್ಯ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಸಿನಿಮಾ ಭವಿಷ್ಯ ಈಗಲೇ ಮುಗಿದಿಲ್ಲ ಎಂದು ಹೇಳಲಾಗುತ್ತಾ ಇದೆ. ಚುನಾವಣೆ ಫಲಿತಾಂಶ ಎಲ್ಲವನ್ನೂ ನಿರ್ಧಾರ ಮಾಡಲಿದೆ.

ವಿಜಯ್ ಅವರು ರಾಜಕೀಯಕ್ಕೆ ಕಾಲಿಡಬೇಕು ಎಂದು ನಿರ್ಧರಿಸಿಯಾಗಿದೆ. ಟಿವಿಕೆ ಹೆಸರಿನ ಪಕ್ಷ ಸ್ಥಾಪಿಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಪಕ್ಷ ತಮಿಳುನಾಡಿನಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವ ಗುರಿ ಹೊಂದಿದ್ದಾರೆ. ದಳಪತಿ ವಿಜಯ್​​ಗೆ ರಾಜಕೀಯ ಹೊಸದು. ಅವರು ತಮ್ಮ ಜನಪ್ರಿಯತೆ ಬಳಸಿ ಮೊದಲ ಚುನಾವಣೆಯಲ್ಲೇ ಗೆದ್ದೇ ಬಿಡುತ್ತಾರೆ ಎಂದು ಹೇಳೋದು ಕಷ್ಟಕರವಾಗಿದೆ.

ಒಂದೊಮ್ಮೆ ಟಿವಿಕೆ ಪಕ್ಷ ಚುನಾವಣೆಯಲ್ಲಿ ಬಹುಮತ ಪಡೆದರೆ ವಿಜಯ್ ತಮಿಳುನಾಡು ಸಿಎಂ ಆಗಲಿದ್ದಾರೆ. ಒಂದೊಮ್ಮೆ ರಾಜಕೀಯ ಕೈ ಹಿಡಿಯದೇ ಇದ್ದರೆ ಮುಂದಿನ ಐದು ವರ್ಷಗಳ ಕಾಲ ಅವರು ವರ್ಷಕ್ಕೆ ಎರಡು ಸಿನಿಮಾಗಳನ್ನು ಮಾಡುವ ಗುರಿ ಹೊಂದಿದ್ದಾರೆ. ಈ ವೇಳೆ ಅವರು ಹಿಂಬದಿಯಲ್ಲಿ ಪಕ್ಷ ಬೆಳೆಸುವ ಕಾರ್ಯವನ್ನೂ ಮಾಡಲಿದ್ದಾರೆ.

ಅಟ್ಲಿ ಅವರು ಸದ್ಯ ಅಲ್ಲು ಅರ್ಜುನ್ ಸಿನಿಮಾದ ನಿರ್ದೇಶನದಲ್ಲಿ ಬ್ಯುಸಿ ಇದ್ದಾರೆ. ಒಂದೊಮ್ಮೆ ವಿಜಯ್ ರಾಜಕೀಯ ಭವಿಷ್ಯ ಅತಂತ್ರವಾದರೆ ಅಟ್ಲಿ ಜೊತೆ ವಿಜಯ್ ಸಿನಿಮಾ ಮಾಡುವ ಸಾಧ್ಯತೆ ಇದೆಯಂತೆ. ರಾಜಕೀಯದಲ್ಲಿ ಯಶಸ್ಸು ಸಿಗದೆ ಇದ್ದರೆ ಅಕ್ಟೋಬರ್​ ಅಲ್ಲಿ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ವಿಜಯ್ ಅವರು ಟಿವಿಕೆ ಪಕ್ಷ ಕಟ್ಟಿ ಅದನ್ನು ಬೆಳೆಸುತ್ತಿದ್ದಾರೆ. ಕರೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಅವರು ಇನ್ನೂ ತನಿಖೆ ಎದುರಿಸುತ್ತಿದ್ದಾರೆ.

0 Shares

By admin

Leave a Reply

Your email address will not be published. Required fields are marked *