0 Shares

ಮುಂಬೈ : ಮಹಾರಾಷ್ಟ್ರದ ಮುಂಬೈಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ದೇಶವೇ ಬೆಚ್ಚಿ ಬಿದ್ದಿದೆ. ನಾಯಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದಾರೆ. ಸದ್ಯ ಈ ಘಟನೆಯ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

ಮುಂಬೈಯ ವರ್ಸೋವಾದಲ್ಲಿ ಈ ಘಟನೆ ನಡೆದಿದ್ದು, ಕಾಮುಕ ಬೀದಿ ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಹೇಯ ಕೃತ್ಯ ಎಸಗುತ್ತಿದ್ದಾಗಲೇ ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಇದಕ್ಕೆ ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿ ಆತನನ್ನು ಥಳಿಸಿ ಪಾಠ ಕಲಿಸಿದ್ದಾರೆ.

ವೈರಲ್ ಆದ ದೃಶ್ಯದಲ್ಲಿ ಅತ್ಯಾಚಾರ ಎಸಗಿದ ವ್ಯಕ್ತಿ ಕ್ಷಮಿಸುವಂತೆ ಅಂಗಲಾಚುತ್ತಿರುವ ದೃಶ್ಯ ಕಂಡು ಬಂದಿದೆ. ಸ್ಥಳೀಯರು ಆತನಿಗೆ ಕಪಾಳಮೋಕ್ಷ ಮಾಡಿ ದೊಣ್ಣೆಯಿಂದ ಹೊಡೆಯುವುದನ್ನು ಕಾಣಬಹುದು. ಆನ್‌ಲೈನ್‌ನಲ್ಲಿ ಈ ದೃಶ್ಯ ಕಾಣಿಸಿಕೊಂಡ ಬಳಿಕ ಆಕ್ರೋಶ ವ್ಯಕ್ತವಾಗಿದೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನೆಟ್ಟಿಗರು ಮುಂಬೈ ಪೊಲೀಸರನ್ನು ಟ್ಯಾಗ್ ಮಾಡುತ್ತಿದ್ದಾರೆ.

ಇನ್ನೊಂದು ವಿಡಿಯೊದಲ್ಲಿ ಆರೋಪಿಯ ಬ್ಯಾಗ್‌ನಲ್ಲಿ ಕಾಂಡೋಮ್ ಪ್ಯಾಕೆಟ್‌, ಫೋನ್ ಚಾರ್ಜರ್ ಕಂಡು ಬಂದಿದೆ. ಆರೋಪಿ ಕುಡಿದ ಮತ್ತಿನಲ್ಲಿ ಈ ರೀತಿಯ ಅಸಹ್ಯ ಕೃತ್ಯದಲ್ಲಿ ತೊಡಗಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಈತ ಸ್ಥಳೀಯ ನಿವಾಸಿಯಾಗಿದ್ದು, ದೇವ್ ಆಯಿ ಕಟ್ಟಡದಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದಾನೆ.

ಈ ವಿಡಿಯೊ ಭಾರಿ ವೈರಲ್ ಆಗಿದ್ದು, ಹಲವರು ಮುಂಬೈ ಪೊಲೀಸರ ಜತೆಗೆ ಪ್ರಾಣಿ ಸಂರಕ್ಷಣಾ ಕಾರ್ಯಕರ್ತ ಸುಧೀರ್ ಕುಡಾಲ್ಕರ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಘಟನೆಯ ಬಗ್ಗೆ ಅನೇಕರು ಆಘಾತ ವ್ಯಕ್ತಪಡಿಸಿದರೆ, ಹಲವರು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

0 Shares

By admin

Leave a Reply

Your email address will not be published. Required fields are marked *