0 Shares

ಕೋಲಾರ : ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ರಾಜ್ಯಪಾಲರ ವಿರುದ್ದ ದಿಕ್ಕಾರಗಳನ್ನು ಹಾಕಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಕೆ. ರಾಘವೇಂದ್ರ ಮಾತನಾಡಿ, ರಾಜ್ಯ ಸರ್ಕಾರ ಎಸ್ಎಸ್ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯ ವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ದೂರಿದರು.

0 Shares

By admin

Leave a Reply

Your email address will not be published. Required fields are marked *