ಕೋಲಾರ : ರಾಜ್ಯಸರ್ಕಾರವು ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸದೆ ವಿಳಂಭ ದೋರಣೆಯನ್ನು ತೋರುತ್ತಿರುವುದನ್ನು ಖಂಡಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಬೃಹತ್ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಾದ ಎಂ.ಆರ್.ರವಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆಯ ಜಿಲ್ಲಾಧ್ಯಕ್ಷ ಚಂದ್ರಪ್ಪ ಮಾತನಾಡಿ, ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿರುವ ಹುದ್ದೆಗಳಿಗೆ ಈ ಕೂಡಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಬೇಕು. ಕೆಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲವಾಗಿರುವುದಿಂದ ವಯೋಮಿತಿಯನ್ನು ಹೆಚ್ಚಿಸಬೇಕು.
ಕೆ.ಪಿ.ಎಸ್.ಸಿ ನಡೆಸಿದ ಕೆ.ಎ.ಎಸ್, ಸಿ.ಟಿ.ಐ, ಪಿಡಿಓ ಇತ್ಯಾದಿ ಪರೀಕ್ಷೆಗಳಲ್ಲಿ ಅಕ್ರಮಗಳು ಕಂಡುಬಂದಿದ್ದು ಇವುಗಳ ಬಗ್ಗೆ ತನಿಖೆ ಮಾಡಲು ಸಿ.ಬಿ.ಐಗೆ ಒಪ್ಪಿಸಬೇಕು. ಜಿಲ್ಲಾ ಗ್ರಂಥಾಲಯದಲ್ಲಿ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
