0 Shares

ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ.

ಈ ಬಾರಿ ಶೇ.86 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷಕ್ಕಿಂತ ಶೇ.12.50 ಫಲಿತಾಂಶ ಏರಿಕೆ ಕಂಡಿದೆ. ಫಲಿತಾಂಶವನ್ನು karresults.nic.in ಅಥವಾ Karnataka one ಮೊಬೈಲ್‌ ಆ್ಯಪ್‌ ಮೂಲಕ ಪಡೆಯಬಹುದು.

ಶಾಲಾ ಶಿಕ್ಷಣ ಇಲಾಖೆ ಪ್ರಪ್ರಥಮ ಬಾರಿಗೆ ಡಿಜಿಲಾಕರ್ ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.

ಮೂಡಬಿದ್ರೆ ನಿವಾಸಿಯೂ ಆಗಿರುವ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದುಕೊಂಡಿದ್ದಾರೆ. ಈ ಸಂತಸವನ್ನು ಹಂಚಿಕೊಂಡಿದ್ದಾರೆ. ಕೊಟ್ಟೂರಿನ‌ ಇಂದೂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಸಂಗೀತಾ ಹಾಗೂ ಅರ್ಚನಾ ಕಲಾ ವಿಭಾಗದಲ್ಲಿ ತಲಾ 598 ಅಂಕ ಪಡೆದು ಸಾಧನೆ ಮಾಡಿದ್ದಾರೆ.

0 Shares

By admin

Leave a Reply

Your email address will not be published. Required fields are marked *