0 Shares

ಬೆಂಗಳೂರು : ನೆನ್ನೆ (ಗುರುವಾರ) ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಪ್ರಕಟವಾಗಿದೆ. ಹಲವಾರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 600ಕ್ಕೆ 600 ಅಂಕವನ್ನೂ ಪಡೆದವರಿದ್ದಾರೆ. ಆದರೆ ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿಯೇ ಗಂಭೀರ ಲೋಪವೊಂದು ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಎಡವಟ್ಟು ಬೆಳಕಿಗೆ ಬಂದಿದೆ.

ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು ಈ ವರ್ಷ ಮರು ಪರೀಕ್ಷೆ ಬರೆದಿದ್ದರು. ಈ ವಿದ್ಯಾರ್ಥಿಗಳ ಫಲಿತಾಂಶವೂ ನಿನ್ನೆ ಪ್ರಕಟವಾಗಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಈ ರೀತಿಯ ಎಡವಟ್ಟು ನಡೆದಿರುವುದು ಮುಜುಗರ ತಂದಿದೆ. ಕೆಲ ವಿದ್ಯಾರ್ಥಿಗಳಿಗೆ ಆರು ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

Karresults.nic.in ವೆಬ್​ಸೈಟ್​ನಲ್ಲಿ ಪ್ರಕಟವಾದ ಫಲಿತಾಂಶದಲ್ಲಿ ಮಾತ್ರ ಈ ಲೋಪ ಕಾಣಿಸಿದೆ. ಆದರೆ ಡಿಜಿ ಲಾಕರ್‌ನಲ್ಲಿ ಲಭ್ಯವಿರುವ ಅದೇ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯಲ್ಲಿ ಅಂಕಗಳು ಸರಿಯಾಗಿರುವುದು ಗಮನಾರ್ಹವಾಗಿದೆ. ಇದರಿಂದ ವೆಬ್‌ಸೈಟ್ ಡೇಟಾ ಅಪ್‌ಲೋಡ್ ವೇಳೆ ತಾಂತ್ರಿಕ ದೋಷ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಈ ಎಡವಟ್ಟಿನಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿದ್ದು, ಫಲಿತಾಂಶದ ನಿಖರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

0 Shares

By admin

Leave a Reply

Your email address will not be published. Required fields are marked *