0 Shares

ಬೆಂಗಳೂರು : ಹುಲಿಕಲ್ ಘಾಟ್‌ನಲ್ಲಿ ರಸ್ತೆ ತಡೆಗೋಡೆ ಕುಸಿದು ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಅವರು, ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿ, ಪರಿಹಾರ ಘೋಷಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ‌ ದುಃಖವಾಯಿತು. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಈ ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

0 Shares

By admin

Leave a Reply

Your email address will not be published. Required fields are marked *