0 Shares

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ, ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು.

ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ, ಇದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

0 Shares

By admin

Leave a Reply

Your email address will not be published. Required fields are marked *