0 Shares

ಬೆಂಗಳೂರು : ದೇಶದ ಪ್ರಮುಖ ನಗರಗಳಾದ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಸಂಪರ್ಕಕ್ಕೆ ಮಹತ್ವದ ಉತ್ತೇಜನ ದೊರೆತಿದ್ದು, ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಡುವೆ ಚಲಿಸಲಿದೆ.

ಈ ಹಿಂದೆ ಈ ವಿಷಯವನ್ನು ಮುನ್ನೆಲೆಗೆ ತಂದಿದ್ದ ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಅವರ ನಿರಂತರ ಪ್ರಯತ್ನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 2 ರಂದು ನೈಋತ್ಯ ರೈಲ್ವೆ ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಮೋಹನ್ ವಂದೇ ಭಾರತ್ ಸ್ಲೀಪರ್ ರೈಲನ್ನು ಪರಿಚಯಿಸಲು ಒತ್ತಾಯಿಸಿದ್ದರು. ಅಲ್ಲದೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್​ ಅನ್ನು ಮೂಲ ಅಥವಾ ಮುಕ್ತಾಯ ನಿಲ್ದಾಣವೆಂದು ಸೂಚಿಸಿದ್ದರು.

ಪ್ರಸ್ತುತ ಈ ಮಾರ್ಗದಲ್ಲಿ ಡಜನ್‌ಗಟ್ಟಲೆ ರೈಲುಗಳು ಸಂಚರಿಸುತ್ತಿದ್ದರೂ, ಉದ್ಯಾನ್ ಎಕ್ಸ್‌ಪ್ರೆಸ್ ಮಾತ್ರ ನೇರ ಸಂಪರ್ಕ ಕಲ್ಪಿಸುತ್ತಿದೆ. ಸುಮಾರು 1,136 ಕಿಮೀ ದೂರವನ್ನು ಈ ರೈಲು 23ರಿಂದ 24 ಗಂಟೆಗಳ ಅವಧಿಯಲ್ಲಿ ಸಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯದಿಂದ ಪ್ರಯಾಣ ಸಮಯವು ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.

0 Shares

By admin

Leave a Reply

Your email address will not be published. Required fields are marked *