0 Shares

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂದೂರು ಬಳಿ ನಿರ್ಮಿಸಲಾಗಿರುವ ಬೃಹತ್ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದಕ್ಕೆ ‘ಸಿದ್ದರಾಮಯ್ಯ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ.

ಉದ್ಘಾಟನೆ ಬಳಿಕ ಸೇತುವೆ ವೀಕ್ಷಿಸಿದ ಸಿಎಂ, ನಂತರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಬಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

0 Shares

By admin

Leave a Reply

Your email address will not be published. Required fields are marked *