0 Shares

ಬೆಂಗಳೂರು : ಸಂವಿಧಾನ ಶಿಲ್ಪಿ ‌ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ‌ ಜನ್ಮದಿನಾಚರಣೆ ಅಂಗವಾಗಿ ‌ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಂದು‌ ವಿಧಾನಸೌಧ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸನ್ಮಾನ್ಯ‌ ಸಿಎಂ ಸಿದ್ದರಾಮಯ್ಯ ‌ಅವರು ಭಾಗವಹಿಸಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಿದರು.

ಈ‌ ಸಮಯದಲ್ಲಿ ಸಮಾಜ ಕಲ್ಯಾಣ ಇಲಾಖೆ‌ ಸಚಿವರಾದ ಹೆಚ್.ಸಿ. ಮಹಾದೇವಪ್ಪ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಕೆ.ಹೆಚ್. ಮುನಿಯಪ್ಪ, ವಸತಿ ಮತ್ತು ವಕ್ಪ್ ಸಚಿವರಾದ ಬಿ.ಝಡ್ ಜಮೀರ್ ಅಹಮ್ಮದ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ‌ ಸಲೀಂ ‌ಅಹಮ್ಮದ್, ವಿಧಾನ ಪರಿಷತ್ತಿನ ಸದಸ್ಯರಾದ ಭೋಜೇಗೌಡ, ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್‌ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ‌. ಶಾಲಿನಿ ರಜನೀಶ್ ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

0 Shares

By admin

Leave a Reply

Your email address will not be published. Required fields are marked *