0 Shares

ಬೆಂಗಳೂರು : ಮಾದಕ ವಸ್ತು ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ನಗರದ ವಿವಿಧೆಡೆ ದಾಳಿ ನಡೆಸಿ ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಈ ಜಾಲದಲ್ಲಿ ಶಾಮೀಲಾಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಹಾಗೂ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಬಂಧಿತರಿಂದ ಭಾರಿ ಪ್ರಮಾಣದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 5.9 ಕೆಜಿ ಎಂಡಿಎಂಎ (MDMA), 1.15 ಕೆಜಿ ಕೊಕೇನ್, 21 ಕೆಜಿ ಗಾಂಜಾ ಮತ್ತು 19 ಗ್ರಾಂ ಎಕ್ಸ್‌ಟೆಸಿ ಮಾತ್ರೆಗಳು ಸೇರಿವೆ.

ಜೊತೆಗೆ ಕೃತ್ಯಕ್ಕೆ ಬಳಸುತ್ತಿದ್ದ ಒಂದು ದ್ವಿಚಕ್ರ ವಾಹನವನ್ನು ಸೀಜ್ ಮಾಡಲಾಗಿದೆ. ಈ ಪೈಕಿ ವಿದೇಶಿ ಮಹಿಳೆಯರು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿ ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

0 Shares

By admin

Leave a Reply

Your email address will not be published. Required fields are marked *