0 Shares

ಬಳ್ಳಾರಿ : ಜಿಲ್ಲೆಯಲ್ಲಿ ಕೋಟ್ಯಾಂತರ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದು, ನಂತರ 24 ಗಂಟೆಗಳೊಳಗೆ ಮತ್ತೆ ಬಂಧನಕ್ಕೊಳಗಾದ ಘಟನೆ ಸಂಚಲನ ಮೂಡಿಸಿದೆ.

ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಪ್ಪಿಸಿಕೊಂಡಿದ್ದಾನೆ. ತಡರಾತ್ರಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿಯನ್ನು ಮತ್ತೆ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ.

ಸಂತೋಷ್ ವಿರುದ್ಧ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ 16.17 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಮಾಡಿದ ಆರೋಪ ಇದೆ. ಗುತ್ತಿಗೆ ನೌಕರನಾಗಿದ್ದ ಸಂತೋಷ್, ಅಧಿಕಾರಿಗಳ ನಕಲಿ ಸಹಿಗಳನ್ನು ಬಳಸಿ ಚೆಕ್‌ಗಳ ಮೂಲಕ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಖಾಸಗಿ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಟ್ಟು ಏಳು ಮಂದಿ ಭಾಗಿಯಾಗಿರುವ ಶಂಕೆ ಇದೆ.

2022ರಿಂದ 2026ರವರೆಗೆ ಹಂತ ಹಂತವಾಗಿ ಹಣ ಲೂಟಿ ಮಾಡಲಾಗಿದ್ದು, 2026 ಮಾರ್ಚ್ 3ರಂದು ಪ್ರಕರಣ ಬಹಿರಂಗಗೊಂಡಿತ್ತು. ಬಳಿಕ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸಂತೋಷ್ ಪರಾರಿಯಾಗಿದ್ದ. ನಿರಂತರ ಹುಡುಕಾಟದ ಬಳಿಕ ಏಪ್ರಿಲ್ 15ರಂದು ಪೊಲೀಸರು ಅವನನ್ನು ಬಂಧಿಸಿದ್ದರು. ಸರ್ಕಾರಿ ಹಣ ದುರ್ಬಳಕೆ ಪ್ರಕರಣವಾಗಿರುವುದರಿಂದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಸಿಐಡಿಗೆ ಒಪ್ಪಿಸುವ ಮುನ್ನವೇ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡಿರದ್ದ ಎನ್ನಲಾಗಿದೆ.

0 Shares

By admin

Leave a Reply

Your email address will not be published. Required fields are marked *