ಈ ಬಗ್ಗೆ ದೆಹಲಿಯಲ್ಲಿ ಪರಿಷತ್ನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ವಿಧೇಯಕಕ್ಕೆ ಸೋಲಾಗಿಲ್ಲ, ಬಿಜೆಪಿಯ ಕುಟಿಲ ನೀತಿಗೆ ಸೋಲಾಗಿದೆ. ಲಕ್ಷಾಂತರ ಜನ ಕಷ್ಟಪಟ್ಟು ಸ್ವಾತಂತ್ರ್ಯ ಕೊಡಿಸಿದ ದೇಶದಲ್ಲಿ ಕುಟೀಲ ನೀತಿ ಮಾಡಿ ಅಧಿಕಾರಕ್ಕೆ ಬರಲು ಸಂಚು ರೂಪಿಸಲಾಗಿತ್ತು ಎಂದು ವಾಗ್ದಾಳಿ ಮಾಡಿದ್ದಾರೆ.
ಬಿಲ್ ಬೆಂಬಲ ಸಿಗದಿರುವುದು ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಸಿಕ್ಕ ಜಯ. ಆರ್ಎಸ್ಎಸ್, ಬಿಜೆಪಿ ತಂತ್ರಗಳನ್ನು ಸೋಲಿಸಿದ್ದಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್, ವಿಪಕ್ಷಗಳಿಗೆ ಧನ್ಯವಾದ ಹೇಳಬೇಕು. 2023ರಲ್ಲಿ ಪಾಸ್ ಆಗಿದ್ದ ವಿಧೇಯಕ ಯಾಕೆ ಅನುಷ್ಠಾನಕ್ಕೆ ತರಲಿಲ್ಲ. ಬಿಜೆಪಿಯವರು ಕೇವಲ ಮೊಸಳೆ ಕಣ್ಣೀರು ಹಾಕುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಎಷ್ಟು ಮಹಿಳೆಯರಿಗೆ ಅವಕಾಶ ಸಿಕ್ಕಿದೆ. 543 ಕ್ಷೇತ್ರಗಳಲ್ಲಿ ಮೀಸಲಾತಿ ತರಬಹುದು, ಮಾಡಲಿ ಬೆಂಬಲಿಸುತ್ತೇವೆ. ಕಾಂಗ್ರೆಸ್ನವರು ಮಹಿಳಾ ಮೀಸಲಾತಿ ವಿರೋಧಿಗಳಲ್ಲ ಎಂದು ಹೇಳಿದ್ದಾರೆ.
