ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿತ್ತು. ಈ ಸಂಬಂಧ ಹೈಕೋರ್ಟ್ನಲ್ಲಿ ಇಂದು ಅರ್ಜಿ ವಿಚಾರಣೆ ನಡೆದಿದ್ದು, ಮತ್ತೆ ರಾಜ್ಯ ಸರ್ಕಾರ ಮುಖಭಂಗವಾಗಿದೆ. ಅಂಕ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ – ಹೈಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ್ದ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಇ.ಎಸ್. ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ಆದೇಶ ನೀಡಿದ್ದಾರೆ. ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಆದರೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ಅರ್ಜಿ ವಜಾಗೊಂಡಿದೆ.
ಸರ್ಕಾರದ ಪರ ಎಜಿ ವಾದ ಏನಿತ್ತು? – ಹಿಂದಿ ಭಾಷೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಅನುತ್ತೀರ್ಣಗೊಂಡಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಕಡಿಮೆ ಮಾಡಲು ಕ್ರಮ. ಸೂಕ್ತ ತಿದ್ದುಪಡಿಯೊಂದಿಗೆ ನಿಯಮ ರಚಿಸಲು ಸರ್ಕಾರ ಕರಡು ರೂಪಿಸುತ್ತಿದೆ. ಅಂಕದ ಬದಲು ಗ್ರೇಡ್ ನೀಡಲಾಗುತ್ತಿದೆ ಎಂದು ಎಜಿ ವಾದ ಮಂಡಿಸಿದರು.
