0 Shares

ಬೆಳಗಾವಿ : ಜಿಲ್ಲೆಯಲ್ಲಿ ಪತ್ನಿಯ ಉಡುಪಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ದಾರುಣ ಅಂತ್ಯ ಕಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಕಿರಾತಕ ಗಂಡ ಬೆಂಕಿ ಹಚ್ಚಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು ಕೋಪದ ಕೈಗೆ ಬುದ್ಧಿಕೊಟ್ಟು ಆತುರದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇತ್ತೀಚಿಗೆ ಅನೈತಿಕ ಸಂಬಂಧದ ವಿಚಾರಕ್ಕೆ ಸಂಸಾರದಲ್ಲಿ ಬಿರುಕು ಬಂದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಇಲ್ಲೊಬ್ಬ ಮಹಾಶಯ ತನ್ನ ಹೆಂಡತಿ, ಮನೆಯಲ್ಲಿ ಸೀರೆ ಉಡದೆ ನೈಟಿ ಹಾಕುತ್ತಿದ್ದಳು ಎಂಬ ವಿಚಾರಕ್ಕೆ ರೊಚ್ಚಿಗೆದ್ದು ಪತ್ನಿಯನ್ನೇ ಸುಡಲು ಮುಂದಾಗೊರುವ ಘಟನೆ ನಡೆದಿದೆ.

ಮಂಜುಳಾ ಪಾಟೀಲ್ ಮತ್ತು ಕೃಷ್ಣಾಜಿ ಪಾಟೀಲ್ ದಂಪತಿ ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮನೆಯಲ್ಲಿ ಪತ್ನಿ ಸೀರೆ ಬದಲು ನೈಟಿ ಅಥವಾ ಗೌನ್ ಧರಿಸುತ್ತಿದ್ದ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಮತ್ತೊಮ್ಮೆ ವಾಗ್ವಾದ ಉಂಟಾಗಿ, ಅದು ಅತಿರೇಕಕ್ಕೆ ತಲುಪಿದ ಸಂದರ್ಭದಲ್ಲಿ ಕೃಷ್ಣಾಜಿ ಪತ್ನಿ ಮಂಜುಳಾಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಘಟನೆಯಿಂದ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ದೇಹದ ಶೇ80ರಷ್ಟು ಭಾಗ ಸುಟ್ಟಿದೆ. ಗಂಭೀರ ಗಾಯಗಳಿಂದ ಬಳಲಿದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗೋವಾಕ್ಕೆ ಸ್ಥಳಾಂತರಿಸಲಾಗಿದೆ.

ಮನೆಯಲ್ಲಿ ಗಲಾಟೆಯ ಶಬ್ದ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂದಗಡ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

0 Shares

By admin

Leave a Reply

Your email address will not be published. Required fields are marked *