0 Shares

ಬೀದರ್ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನಮ್ಮ ಮತ್ತು ಖರ್ಗೆ ಅವರ ದೃಷ್ಟಿಕೋನದಲ್ಲಿ ಸಣ್ಣ ಬದಲಾವಣೆ ಇದೆ ಅನಿಸುತ್ತೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಳಿ ಹಾಗೂ ಕಪ್ಪು ನಡುವಿನ ವ್ಯತ್ಯಾಸ ಇಲ್ಲ ಎಂದರು.

ಅದೇ ರೀತಿ ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ವ್ಯತ್ಯಾಸವಿಲ್ಲದಂತೆ ಕಾಣುತ್ತೆ. ಅದನ್ನು ಬಿಟ್ಟರೆ ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ರಾಧಾಕೃಷ್ಣನ್ ಹೇಳಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದಲ್ಲಿ ನಡೆದ ಡಾ.ಬಸವಲಿಂಗ ಪಟ್ಟದೇವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ, ಉಪರಾಷ್ಟ್ರಿಪತಿಗಳು ಈ ರೀತಿ ಹೇಳಿಕೆ ನೀಡಿದ್ದಾರೆ.

0 Shares

By admin

Leave a Reply

Your email address will not be published. Required fields are marked *