0 Shares

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ನಡೆಸಿದ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಈ ಗಾಂಜಾದ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎನ್ನಲಾಗಿದೆ. ತಕ್ಷಣವೇ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಕೂಡ ಬ್ಯಾಂಕಾಕ್‌ನಿಂದ ಬಂದಿದ್ದ, ಪ್ರಯಾಣಿಕ ಅಕ್ರಮವಾಗಿ ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ವೇಳೆ ಸುಮಾರು 1.7 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು 4.7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

0 Shares

By admin

Leave a Reply

Your email address will not be published. Required fields are marked *