0 Shares

ಬೆಂಗಳೂರು : ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರು ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರವರು 50 ವರ್ಷಗಳ ರಾಜಕೀಯ ಜೀವನ ಪೂರೈಸಿದ ಸಂದರ್ಭದಲ್ಲಿ ಅಭಿಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಸಂಜೆ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ್, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಅರಗ ಜ್ಞಾನೇಂದ್ರ, ವಿಧಾನಸಭೆಯ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯರಾದ ಸುನೀಲ್ ವಲ್ಲ್ಯಾಪುರೆ, ಭಾರತಿ ಶೆಟ್ಟಿ ಅವರು ಭಾಗವಹಿಸಿದ್ದರು.

0 Shares

By admin

Leave a Reply

Your email address will not be published. Required fields are marked *