0 Shares

ಚಿತ್ರದುರ್ಗ : ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾಂಗ್ರೆಸ್​ ಮುಖಂಡನ ಶವ ಪತ್ತೆಯಾಗಿದೆ. ಮೃತರನ್ನು ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ‘ಕೈ’​ ಮುಖಂಡ ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದ್ದು, ಮೂರು ದಿನಗಳ ಹಿಂದೆ ಇವರು ನಾಪತ್ತೆಯಾಗಿದ್ದರು.

ಇಂದು ಅವರ ಮೃತದೇಹ ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಗೆ ಸಂಬಂಧಿಕರಿಂದ ಆಗ್ರಹ ವ್ಯಕ್ತವಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​​ ಸವಾರರಿಬ್ಬರು ಧಾರುಣವಾಗಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹನಗವಾಡಿ ಸಮೀಪದ ಸಾಸ್ವಿಹಳ್ಳಿ- ಆನವೇರಿ ರಸ್ತೆಯಲ್ಲಿ ನಡೆದಿದೆ. ನವೀನ್ ಎನ್. ಎಂ. (33) ಮತ್ತು ಶಶಿಕುಮಾರ್ (32) ಮೃತರಾಗಿದ್ದು, ಡಿಕ್ಕಿ ರಭಸಕ್ಕೆ ನವೀನ್ ಸ್ಥಳದಲ್ಲಿಯೇ ಜೀವ ಬಿಟ್ಟಿದ್ದಾರೆ.

ಶಶಿಕುಮಾರ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪ್ರಾಣ ಕಳೆದುಕೊಂಡಿದ್ದಾರೆ. ಇವರಿಬ್ಬರು ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳು ಎಂಬುದು ಗೊತ್ತಾಗಿದೆ. ಸ್ವಗ್ರಾಮದಿಂದ ಕಾರ್ಯ ನಿಮಿತ್ತ ಆನವೇರಿಗೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಅಪಘಾತ ಮಾಡಿದ ಚಾಲಕ ವಾಹನ ಸಹಿತ ಪರಾರಿಯಾಗಿದ್ದು, ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Shares

By admin

Leave a Reply

Your email address will not be published. Required fields are marked *