0 Shares

ಮಂಡ್ಯ : ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ.

ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ ಬರುವುದಿಲ್ಲ ಎಂದು ಕುಟುಂಬಕ್ಕೆ ತಿಳಿಸಿ ಹೊರಟಿದ್ದ. ಆದರೆ ನಂತರ ಆತ ಮನೆಗೆ ವಾಪಸ್ ಆಗಿಲ್ಲ. ಅವನ ಮೊಬೈಲ್ ಸ್ವಿಚ್ ಆಫ್ ಆಗಿರುವುದರ ಜೊತೆಗೆ ಸಾಮಾಜಿಕ ಜಾಲತಾಣ ಖಾತೆಗಳೂ ಡಿ-ಆಕ್ಟಿವ್ ಆಗಿದ್ದವು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದೀಗ ನಿನ್ನೆ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿಯಲ್ಲಿ ಪವನ್ ಅವರ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗಾಯಗಳಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಇದು ಕೊಲೆ ಆಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದು, ಪವನ್ ಸಾವಿನ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

0 Shares

By admin

Leave a Reply

Your email address will not be published. Required fields are marked *