0 Shares

ಚಿಕ್ಕಮಗಳೂರು : ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀ ನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ.

ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರೊಂದಿಗೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ. ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ.

ರಾತ್ರಿ ಪೂರ್ತಿ ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಸಂಯುಕ್ತವಾಗಿ ಶೋಧ ಕಾರ್ಯ ನಡೆಸಿದರು. ಇಂದೂ ಡ್ರೋನ್ ಸಹಾಯದಿಂದ ಹುಡುಕಾಟ ಮುಂದುವರಿದಿದ್ದು, ಸಂಪೂರ್ಣ ಹುಲ್ಲುಗಾವಲು ಹಾಗೂ ಇಳಿಜಾರು ಪ್ರದೇಶಗಳಿಂದ ಕೂಡಿರುವ ಈ ಪ್ರದೇಶದಲ್ಲಿ ಕಾರ್ಯಾಚರಣೆ ಸವಾಲಿನದ್ದಾಗಿದೆ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ.

0 Shares

By admin

Leave a Reply

Your email address will not be published. Required fields are marked *