0 Shares

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀರ್ಪು ಏಪ್ರಿಲ್ 15ರಂದು ಪ್ರಕಟವಾಗಲಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ವಿಚಾರಣೆ ನಡೆಸಿ, ವಾದ ಪ್ರತಿ ವಾದಗಳನ್ನು ಆಲಿಸಿ, ಏಪ್ರಿಲ್ 15ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿತು. ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಎ-15 ಆಗಿದ್ದಾರೆ.

2016ರಲ್ಲಿ ಕೊಲೆ ನಡೆದಾಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈಪ್ರೊಫೈಲ್ ಕೇಸ್ ಆಗಿತ್ತು.

ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು. ಅಲ್ಲದೇ ಪೊಲೀಸ್ ಅಧಿಕಾರಿಗಳು ಕೂಡಾ ಇದರಲ್ಲಿ ತಳಕು ಹಾಕಿಕೊಂಡಿದ್ದಾರೆ. ಈ ಕೊಲೆ ನಡೆದಿದ್ದಾದರೂ ಏಕೆ ಎನ್ನುವುದಕ್ಕೆ ಸಿಬಿಐ ಹಲವು ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

0 Shares

By admin

Leave a Reply

Your email address will not be published. Required fields are marked *