0 Shares

ಬೆಂಗಳೂರು : ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಏಪ್ರಿಲ್​ 09 ರಂದು ಪ್ರಕಟವಾಗಿದ್ದು, ಈ ಬಾರಿ ಶೇಕಡಾ 86ರಷ್ಟು ಮಕ್ಕಳು ಪಾಸ್​ ಆಗುವ ಮೂಲಕ ಫಲಿತಾಂಶ ದಾಖಲೆ ಮಟ್ಟಕ್ಕೆ ಏರಿಕೆ ಆಗಿದೆ. ಇನ್ನು ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ.

ಆ ಮೂಲಕ ವಸತಿ ಶಾಲೆಗಳಲ್ಲೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್​​ಇಇಟಿ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಮಾಜಕಲ್ಯಾಣ ಸಚಿವ ಹೆಚ್​​ಸಿ ಮಹದೇವಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಮಾಜಕಲ್ಯಾಣ ಸಚಿವ ಹೆಚ್‌.ಸಿ.ಮಹದೇವಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಹಳ್ಳಿ ಮಕ್ಕಳು ಹೆಚ್ಚು ಪಾಸಾಗಿದ್ದಾರೆ, ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚು ಪಾಸಾಗಿದ್ದಾರೆ. ಇದು ಬಹಳ ಸಂತೋಷ. ವಸತಿ ಶಾಲೆಗಳಲ್ಲಿ ಈ ಬಾರಿ ಹೆಚ್ಚಿನ ರಿಸಲ್ಟ್ ಬಂದಿದೆ ಎಂದು ಹೇಳಿದರು.

ರಾಜ್ಯದಲ್ಲಿ 539 ಎಸ್​ಸಿ, 156 ಎಸ್​ಟಿ ಮತ್ತು 179 ಹಿಂದುಳಿದ ವರ್ಗಗಳ ವಸತಿ ಶಾಲೆಗಳಿವೆ. ವಿಜ್ಞಾನ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತ್ ಭೀಮಪ್ಪ 598 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಇನ್ನು ವಸತಿ ಶಾಲೆಗಳಲ್ಲಿ ಓದಿದ 2,321 ಮಕ್ಕಳು ಡಿಸ್ಟಿಂಕ್ಷನ್​, 2487 ವಿದ್ಯಾರ್ಥಿಗಳು ಫಸ್ಟ್​​ ಕ್ಲಾಸ್​​ನಲ್ಲಿ ಪಾಸ್​ ಆಗಿದ್ದಾರೆ. 72 ವಸತಿ ಕಾಲೇಜುಗಳಲ್ಲಿ JEE, NEET, KCET ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಮಾಜಕಲ್ಯಾಣ ಸಚಿವ ಹೆಚ್​​ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ.

0 Shares

By admin

Leave a Reply

Your email address will not be published. Required fields are marked *