0 Shares

ಯಾದಗಿರಿ : ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮ ನಿವಾಸಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಕುಟುಂಬವು ನಿನ್ನೆ (ಶುಕ್ರವಾರ) ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಕ್ರೂಸರ್ ವಾಹನದಲ್ಲಿ ಸಂಚರಿಸುತ್ತಿದ್ದಾಗ ತಡೆಗೋಡೆಗೆ ಡಿಕ್ಕಿಯಾಗಿ ರಾಮರೆಡ್ಡಿ (52), ಅವರ ಪತ್ನಿ ಮೇಘಾ (50) ಮತ್ತು ವಿಜಯಪುರ ಮೂಲದ ಮಹದೇವಪ್ಪ (65) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ತಿಳಿದು ಬಂದಿದೆ. ಕಾರು ಚಲಿಸುತ್ತಿದ್ದ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

0 Shares

By admin

Leave a Reply

Your email address will not be published. Required fields are marked *