0 Shares

ಬೆಂಗಳೂರು : ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ವಜಾ ಮಾಡಿದ ನಂತರ, ಸಚಿವ ಜಮೀರ್​​​ ಜತೆ ಸಿಎಂ ಸಿದ್ಧರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ.

ಈ ಚರ್ಚೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಗರಂ ಆಗಿದ್ದರು. ಹೈಕಮಾಂಡ್​ ಕೇಳುವ ಎಲ್ಲ ಪ್ರಶ್ನೆಗೂ ನೀನೇ ಉತ್ತರ ನೀಡುಬೇಕು ಎಂದು ಹೇಳಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಂದು ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ನಸೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ನಸೀರ್ ಅಹ್ಮದ್ ಅವರ ವಜಾ ಬಳಿಕ ನಡೆದ ಮೊದಲ ಭೇಟಿ ಇದಾಗಿದೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಅವರಿಗೆ “ಹೈಕಮಾಂಡ್ ದೂರುಗಳ ಬಗ್ಗೆ ನೀನೇ ಉತ್ತರ ನೀಡಬೇಕು” ಎಂದು ತಾಕೀತು ಮಾಡಿದ್ದರು. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಅವರು ಅಸಮಾಧಾನಗೊಂಡಿರುವ ನಾಯಕರನ್ನು ಭೇಟಿ ಮಾಡುತ್ತಿರುವುದು ಮಹತ್ವ ಪಡೆದಿದೆ.

ದಾವಣಗೆರೆಯಲ್ಲಿ ಎದ್ದಿರುವ ಬಂಡಾಯದ ಕಿಚ್ಚು ಹೈಕಮಾಂಡ್ ಮಟ್ಟಕ್ಕೆ ತಲುಪಿದ್ದು, ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ಅವರ ಅಸಮಾಧಾನವನ್ನು ಶಮನಗೊಳಿಸಲು ಜಮೀರ್ ಅಹ್ಮದ್ ಸಂಧಾನಕ್ಕೆ ಇಳಿದಿದ್ದಾರೆಯೇ ಅಥವಾ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ದಾವಣಗೆರೆ ಚುನಾವಣೆಯಲ್ಲಿ ಆಗಿರುವ ಗೊಂದಲದಿಂದ ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್​​​​​​​​​​​​​​​​​ ಮುಸ್ಲಿಂ ನಾಯಕರ ತಲೆದಂಡ ಮಾಡುತ್ತಿದೆ ಎಂದು ಹೇಳಲಾಗಿದೆ.

0 Shares

By admin

Leave a Reply

Your email address will not be published. Required fields are marked *