0 Shares

ಮಂಡ್ಯ : ಕೊನೆಗೂ ಭಕ್ತರು ಕಾದು ಕುಳಿತಿದ್ದ ಕ್ಷಣ ಬಂದೇ ಬಿಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ.

ದ್ರಾವಿಡ, ಚಾಲುಕ್ಯ, ಹೊಯ್ಸಳ ಮತ್ತು ಗಂಗರ ಶೈಲಿಯ ವಿನ್ಯಾಸಗಳನ್ನು ಒಳಗೊಂಡಿರುವ ಈ ಮಂದಿರವು ಒಡಿಶಾದ ಸೂರ್ಯ ದೇವಾಲಯದ ನಿರ್ಮಾಣದಿಂದ ಪ್ರೇರಣೆ ಪಡೆದಿದೆ. ಸುಮಾರು ಹತ್ತು ವರ್ಷಗಳ ನಿರಂತರ ಪರಿಶ್ರಮದಿಂದ 80 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಮಂದಿರವು ವಾಸ್ತುಶಿಲ್ಪಿ ಶಂಕರ್ ಸ್ಥಪತಿ ಅವರ ಮೇಲ್ವಿಚಾರಣೆಯಲ್ಲಿ ಮೂಡಿಬಂದಿದೆ.

ಉದ್ಘಾಟನೆಯ ವೇಳೆ ಪ್ರಧಾನಿ ಮೋದಿ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು.

0 Shares

By admin

Leave a Reply

Your email address will not be published. Required fields are marked *