0 Shares

ನವದೆಹಲಿ : ಸಚಿವ ಸಂಪುಟ ಪುನಾರಚನೆ ಮಾಡುವಂತೆ ಕರ್ನಾಟಕದ 12 ಶಾಸಕರು ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ನಮಗೂ ಸಚಿವ ಸ್ಥಾನ ಕೊಡಿ ಎಂದು ಕಾಂಗ್ರೆಸ್‌ನ ಹಲವು ಹಿರಿಯ ಶಾಸಕರು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಹೈಕಮಾಂಡ್ ನಾಯಕರ ಭೇಟಿಯಾಗಿ ಮನವಿ ಸಲ್ಲಿಸಲು ಪ್ರಯತ್ನಿಸಿದ್ದರು.

ಟಿ.ಬಿ.ಜಯಚಂದ್ರ, ಅಶೋಕ್ ಪಟ್ಟಣ್, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾರ‍್ಲಿ, ಬಸವರಾಜ್ ಶಿವಣ್ಣನವರ್, ಮಹಾಂತೇಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್ ಅವರು ದೆಹಲಿಯಲ್ಲಿ ಉಳಿದಿದ್ದಾರೆ.

ಇಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ.

0 Shares

By admin

Leave a Reply

Your email address will not be published. Required fields are marked *