0 Shares

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ವಿಶೇಷವೆಂದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಚ) ಸದಸ್ಯನೊಬ್ಬನೇ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೆಎಸ್​ಸಿಎ ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ ಎಸಗುತ್ತಿದ್ದ ಎಂಬುದು ಸಿಸಿಬಿ ವಿಚಾರಣೆ ವೇಳೆ ಬಯಲಾಗಿದೆ.

ಸಿಸಿಬಿ ಡಿಸಿಪಿ ಹರಿಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಕ್ಷ್ಮೀ ಕ್ಯಾಟರ್ಸ್ ಹೋಟೆಲ್‌ನ ಕ್ಯಾಪ್ಟನ್ ಚಂದ್ರಶೇಖರ್ ಎಂಬಾತ ಸಿಕ್ಕಿಬಿದ್ದಿದ್ದಾನೆ. 15 ಸಾವಿರ ರೂಪಾಯಿ ಬೆಲೆಯ ಟಿಕೆಟ್‌ಗಳನ್ನು ಈತ ಬರೋಬ್ಬರಿ 19 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಸೆರೆಹಿಡಿದಿದ್ದಾರೆ. ವಿಚಾರಣೆ ವೇಳೆ ಈತ ನೀಡಿದ ಮಾಹಿತಿ ಆಘಾತಕಾರಿಯಾಗಿದ್ದು, ಕೆಎಸ್​​ಸಿಎ ಸದಸ್ಯ ಗಣೇಶ್ ಹರಿಕೇಶ್ ಎಂಬುವವರ ಹೆಸರನ್ನು ಬಾಯ್ಬಿಟ್ಟಿದ್ದಾನೆ.

ಆರೋಪಿ ಗಣೇಶ್ ಹರಿಕೇಶ್, ಎರಡು ಖಾಸಗಿ ಕಂಪನಿಗಳ ಹೆಸರಿನಲ್ಲಿ ಆನ್‌ಲೈನ್ ಮೂಲಕ ದೊಡ್ಡ ಪ್ರಮಾಣದಲ್ಲಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದ. ಆ ಬಳಿಕ ಚಂದ್ರಶೇಖರ್ ಮೂಲಕ ಅವುಗಳನ್ನು ಬ್ಲಾಕ್‌ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಆರ್‌ಸಿಬಿಯ ಮೊದಲ ಪಂದ್ಯದಲ್ಲಿ ಇವರು 81 ಟಿಕೆಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ಪಂದ್ಯಕ್ಕೆ 100 ಟಿಕೆಟ್‌ಗಳನ್ನು ಸಿದ್ಧಪಡಿಸಿಕೊಂಡಿದ್ದರು. ಒಟ್ಟಾರೆಯಾಗಿ 17 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 181 ಟಿಕೆಟ್‌ಗಳನ್ನು ಖರೀದಿಸಿದ್ದು, ಅವುಗಳ ಪೈಕಿ 100 ಟಿಕೆಟ್​ಗಳನ್ನು ಬ್ಲಾಕ್​ನಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ.

15,000 ರೂ. ಮೌಲ್ಯದ ಐಪಿಎಲ್ ಟಿಕೆಟ್‌ಗಳನ್ನು 19,000 ರೂ.ಗೆ ಮಾರಾಟ. ಕೆಎಸ್​​ಸಿಎ ಸದಸ್ಯ ಗಣೇಶ್ ಹರಿಕೇಶ್ ಮತ್ತು ಹೋಟೆಲ್ ಕ್ಯಾಪ್ಟನ್ ಚಂದ್ರಶೇಖರ್ ಪ್ರಮುಖ ಆರೋಪಿಗಳು. ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಒಟ್ಟು 181 ಐಪಿಎಲ್ ಟಿಕೆಟ್‌ಗಳ ಅಕ್ರಮ ವ್ಯವಹಾರ ಪತ್ತೆ. ಟಿಕೆಟ್ ಪೂರೈಸಿದ ಖಾಸಗಿ ಕಂಪನಿಗಳಿಗೂ ಸಿಸಿಬಿಯಿಂದ ತನಿಖೆಯ ಬಿಸಿ.

ಚಂದ್ರಶೇಖರ್ ಬಂಧನವಾಗುತ್ತಿದ್ದಂತೆ ಗಣೇಶ್ ಹರಿಕೇಶ್ ನಾಪತ್ತೆಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಟಿಕೆಟ್ ಪೂರೈಸಿದ ಜೀನಿ ಸೇರಿದಂತೆ ಎರಡು ಖಾಸಗಿ ಸಂಸ್ಥೆಗಳಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ಧತೆ ನಡೆಸಲಾಗಿದೆ.

0 Shares

By admin

Leave a Reply

Your email address will not be published. Required fields are marked *