0 Shares

ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲ್ಲೂಕು ಕಚೇರಿಗೆ ಬೆಂಗಳೂರ ಗ್ರಾಮಾಂತರ ಲೋಕಾಯುಕ್ತ ತಂಡ ಭೇಟಿ ನೀಡಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದೆ. ಈ ಪರಿಶೀಲನೆ ಡಿವೈಎಸ್ಪಿ ಗಿರೀಶ್ ರೋಡ್ಕರ್ ಮತ್ತು ಗೌತಮ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.

ಇನ್ಸಪೆಕ್ಟರ್ ಚಂದ್ರಕಾಂತ್ ಮತ್ತು ರಮೇಶ್ ಸೇರಿದಂತೆ ಸಿಬ್ಬಂದಿ ದಾಖಲೆಗಳ ಪರಿಶೀಲನೆಗೆ ಭಾಗಿಯಾಗಿದ್ದಾರೆ. ತಂಡವು ಕ್ಯಾಶ್ ಡೆಪಾಸಿಟ್ ರಿಜಿಸ್ಟರ್, ಹಾಜರಾತಿ ವಹಿ ಹಾಗೂ ಇತರೆ ಅಧಿಕೃತ ಕಡತಗಳ ವಹಿ ಪರಿಶೀಲಿಸುತ್ತಿದ್ದು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸೂಕ್ಷ್ಮ ತಪಾಸಣೆ ನಡೆಸುತ್ತಿದೆ.

ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಅಧಿಕಾರಿಗಳಿಂದ ಸಂಗ್ರಹಿಸುತ್ತಿದ್ದಾರೆ. ದೇವನಹಳ್ಳಿ ತಹಶೀಲ್ದಾರ್ ಅನಿಲ್ ಅವರಿಂದ ಮಾಹಿತಿ ಪಡೆಯುತ್ತಿದ್ದು, ಪರಿಶೀಲನೆ ಪ್ರಕ್ರಿಯೆ ಉಚಿತವಾಗಿ, ನ್ಯಾಯಸಮ್ಮತವಾಗಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಈ ಕಾರ್ಯಾಚರಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು ಕಚೇರಿಯಲ್ಲಿ ನಡೆದಿದೆ ಮತ್ತು ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಉಂಟಾಗಲು ಪ್ರಯತ್ನಿಸಲಾಗಿದೆ.

0 Shares

By admin

Leave a Reply

Your email address will not be published. Required fields are marked *