0 Shares

ಸರ್ಕಾರಿ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಗುಣಮಟ್ಟದಲ್ಲಿ ಹೆಚ್ಚಿನ ಉತ್ಕೃಷ್ಟತೆಯನ್ನು ಕಾಪಾಡಿಕೊಳ್ಳದಿದ್ದರೆ ಖಾಸಗಿ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಿಂದ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ.ಸಿ ಸುಧಾಕರ್ ಹೇಳಿದ್ದಾರೆ.

ಶಿಕ್ಷಣ ಕೌಶಲ್ಯ ಮತ್ತು ಸಾಂಸ್ಕೃತಿಕ ಸಹಯೋಗದ ಬಲವರ್ಧನೆಗಾಗಿ ಬ್ರಿಟಿಷ್ ಕೌನ್ಸಿಲ್ ಜೊತೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮಾಡಿಕೊಂಡ ಒಡಂಬಡಿಕೆ ವೇಳೆ ಮಾತನಾಡುತ್ತಿದ್ದರು. ಮುಂದಿನ ದಿನಗಳಲ್ಲಿ ನಮ್ಮ ವಿಶ್ವವಿದ್ಯಾಲಯಗಳು ವಿದೇಶಿ ವಿಶ್ವವಿದ್ಯಾಲಯಗಳ ಪೈಪೋಟಿಯನ್ನು ಎದುರಿಸುವ ಸಾಧ್ಯತೆಗಳಿರುವುದರಿಂದ ನಾವು ಹೆಚ್ಚು ಶೈಕ್ಷಣಿಕವಾಗಿ ಉತ್ಕೃಷ್ಟತೆಯನ್ನು ಕಾಪಾಡಿಕೊಳ್ಳಬೇಕು ಇದು ಅನಿವಾರ್ಯ ಎಂದರು.

ನಮ್ಮ ವಿಶ್ವವಿದ್ಯಾಲಯಗಳ ಶೈಕ್ಷಣಿಕವಾಗಿ ಹೆಚ್ಚು ಪ್ರಬಲವಾದಾಗ ಮಾತ್ರ ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಲಭಿಸುತ್ತದೆ . ಇಂದಿನ ಈ ಒಡಂಬಡಿಕೆ ಮೂಲಕ ರಾಜ್ಯದ ಆರು ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ,ಕೌಶಲ್ಯ, ಡಿಜಿಟಲ್ ಗ್ರಂಥಾಲಯಗಳ ಬಲವರ್ಧನೆಗೆ ಅವಕಾಶ ಸಿಗಲಿದೆ ಎಂದರು.

ಯುಕೆ ವಿಶ್ವವಿದ್ಯಾಲಯಗಳೊಂದಿಗೆ ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣದ ಪ್ರಗತಿ ಗಾಗಿ ನಮ್ಮ ಸರ್ಕಾರ ಹಲವಾರು ಒಡಂಬಡಿಕೆಗಳನ್ನು ಮಾಡಿಕೊಂಡು ಅನುಷ್ಠಾನಗೊಳಿಸಿ ಯಶಸ್ವಿಯಾಗಿದೆ ಎಂದು ಸುಧಾಕರ್ ಅಭಿಪ್ರಾಯಪಟ್ಟರು.

ನಮ್ಮ ವಿಶ್ವವಿದ್ಯಾಲಯಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿರುವುದರಿಂದ ಅವರಿಗೆ ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಪರಿಣಾಮ ಉತ್ತಮವಾದ ಶೈಕ್ಷಣಿಕ ಆಯಾಮ ದೊರಕಲಿದೆ ಎಂದರು.

ಬ್ರಿಟಿಷ್ ಕೌನ್ಸಿಲ್‌ ಭಾರತದ ಉಸ್ತುವಾರಿ ನಿರ್ದೇಶಕಿಯಾದ ಆಲಿಸನ್ ಬ್ಯಾರೆಟ್ ಮಾತನಾಡಿ ಗ್ಲೋಬಲ್ ವೇಲ್ಸ್ ಜೊತೆಗೆ ಕರ್ನಾಟಕ ದೊಂದಿಗಿನ ನಿರಂತರ ಪಾಲುದಾರಿಕೆಯಿಂದ ಜ್ಞಾನ ವಿನಿಮಯಕ್ಕೆ ಉತ್ತೇಜಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಖುಷ್ಬೂ ಚೌದರಿ, ಬ್ರಿಟಿಷ್ ಕೌನ್ಸಿಲ್ ನ ದಕ್ಷಿಣ ಭಾರತದ ನಿರ್ದೇಶಕಿ ಜನಕ ಪುಷ್ಪನಾಥನ್,ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಫ್ರೊ. ನಿರಂಜನ, ಕಾರ್ಯ ನಿರ್ದೇಶಕ ಚಂದ್ರಶೇಖರ್,ವಿಶ್ವವಿದ್ಯಾಲಯದ ಕುಲಪತಿ ಗಳು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

0 Shares

By admin

Leave a Reply

Your email address will not be published. Required fields are marked *